Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:3 - ಪರಿಶುದ್ದ ಬೈಬಲ್‌

3 ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕುದುರೆಗಳನ್ನು ಗಮನಿಸಿರಿ, ಅವುಗಳ ಬಾಯಿಗೆ ಹಾಕುವ ಚಿಕ್ಕ ಕಡಿವಾಣದಿಂದ ನಮಗೆ ಇಷ್ಟಬಂದ ಕಡೆಗೆ ಅವುಗಳನ್ನು ನಡೆಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಕುದುರೆಗಳನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದಿರುವಾಗ ಅವುಗಳ ಬಾಯಿಗೆ ಕಡಿವಾಣಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಘೊಡ್ಕ್ಯಾಕ್ ಅಮ್ಕಾ ಪಾಜೆ ತಸೆ ಚಾಲ್ವುನ್ ಘೆವ್ಕ್ ಮನುನ್ ತೆಕಾ ಲಗಾಮ್ ಘಾಲ್ತಾವ್. ತನ್ನಾ ಅಮ್ಕಾ ಪಾಜೆ ತಸೆ ಚಾಲ್ವುನ್ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:3
7 ತಿಳಿವುಗಳ ಹೋಲಿಕೆ  

ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”


“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”


ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”


ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.


ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು