ಯಾಕೋಬನು 3:6 - ಪರಿಶುದ್ದ ಬೈಬಲ್6 ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ. ಅಧ್ಯಾಯವನ್ನು ನೋಡಿ |
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.