ಯಾಕೋಬನು 4:2 - ಪರಿಶುದ್ದ ಬೈಬಲ್2 ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತುಮಿ ದೆವಾಕ್ಡೆ ಲೈ ಮಾಗ್ತ್ಯಾಸಿ ತೆ ತುಮ್ಕಾ ಗಾವಿನಾ, ತಸೆ ಹೊವ್ನ್ ತುಮಿ ಜಿವ್ ಕಾಡುಕ್ ಸೈತ್ ತಯಾರ್ ಹೊತ್ಯಾಶಿ. ಲೈ ಆಶಾ ಕರ್ತ್ಯಾಸಿ ಖರೆ ತೆ ತುಮ್ಕಾ ಗಾವಿನಾ ತಸೆ ಹೊವ್ನ್ ತುಮಿ ಝಗ್ಡೆ ಅನಿ ಮಾರಾ ಮಾರಿ ಕರ್ತ್ಯಾಸಿ ತುಮ್ಕಾ ಹೆ ಸಗ್ಳೆ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆ ಸಗ್ಳೆ ದೆವಾಕ್ಡೆ ಮಾಗಿನ್ಯಾಸಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.