ಯಾಕೋಬನು 4:3 - ಪರಿಶುದ್ದ ಬೈಬಲ್3 ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ಮಾಗ್ತ್ಯಾಸಿ, ಖರೆ ತುಮ್ಕಾ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ಬುರ್ಶ್ಯಾ ಆಸೆನ್ ಅನಿ ತುಮ್ಚ್ಯಾ ಸ್ವತಾಚ್ಯಾ ಸುಖಾಚ್ಯಾ ಫಾಯ್ದ್ಯಾಸಾಟ್ನಿ ತುಮಿ ಮಾಗ್ತ್ಯಾಶಿ. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.