Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:6 - ಪರಿಶುದ್ದ ಬೈಬಲ್‌

6 ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಸಾಂಗ್ತಲ್ಯಾ ಸಾರ್ಕೆ “ದೆವ್ ಹಂಕಾರ್‍ಯಾಕ್ನಿ ವಿರೊದ್ ಕರ್ತಾ, ಖರೆ ಖಾಯ್ಲ್ ಹೊವ್ನ್ ಚಲ್ತಲ್ಯಾಕ್ನಿ ಕುರ್ಪಾ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:6
34 ತಿಳಿವುಗಳ ಹೋಲಿಕೆ  

ತಾನು ಬೇರೆಯವರಿಗಿಂತ ಉತ್ತಮನೆಂದು ತನ್ನನ್ನು ಭಾವಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಉನ್ನತಿಗೇರಿಸಲ್ಪಡುವನು.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದ್ದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.


ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.


ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು