ಯಾಕೋಬನು 4:7 - ಪರಿಶುದ್ದ ಬೈಬಲ್7 ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆ ಹೊವ್ನ್ ತುಮಿ ದೆವಾಕ್ ಜಗೊಳ್ ಹೊವ್ನ್ ರ್‍ಹಾವಾ ಅನಿ ಗಿರ್ಯಾಕ್ ಅಡ್ವಾ, ತನ್ನಾ ತೊ ತುಮ್ಚ್ಯಾಕ್ನಾ ಧುರ್ ಪಳುನ್ ಜಾತಾ. ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.