Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:11 - ಪರಿಶುದ್ದ ಬೈಬಲ್‌

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಯ್ಕಾ! ಸೊಸುನ್ ಘೆತಲೊ ಧನ್ಯ್, ತುಮಿ ಜೊಬಾನ್ ಸೊಸುನ್ ಘೆಟಲ್ಲ್ಯಾ ವಿಶಯಾತ್ ಆಯಿಕ್ಲ್ಯಾಶಿ ಅನಿ ಆಕ್ರಿಕ್ ಸರ್ವೆಸ್ವರ್ ದೆವಾನ್ ಕಸೆ ತೆಕಾ ದಿಲ್ಲ್ಯಾನ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವ್ ಕರಾನಾನ್‍ ಅನಿ ದಯೆನ್ ಭರಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:11
53 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!


ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.


ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.


ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ಯೋಬನಿಗೆ ಏಳು ಗಂಡುಮಕ್ಕಳೂ ಮೂರು ಹೆಣ್ಣುಮಕ್ಕಳೂ ಇದ್ದರು.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು