Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:16 - ಪರಿಶುದ್ದ ಬೈಬಲ್‌

16 ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಮನುನ್ ಎಕಾಮೆಕಾಚಿ ಪಾಪಾ ಸಾಂಗುನ್ ಘೆವಾ ಅನಿ ಎಕಾಮೆಕಾಸಾಟ್ನಿ ಮಾಗ್ನಿ ಕರಾ, ಅಸೆ ತುಮಿ ಗುನ್ ಹೊತ್ತ್ಯಾಸಿ ಅನಿ ಎಕ್ ನಿತಿವಂತ್ ಮಾನ್ಸಾನ್ ಕರಲ್ಲ್ಯಾ ಮಾಗ್ನಿಕ್ ಲೈ ಬಳ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:16
68 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.


ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ವಿಶ್ವಾಸಿಗಳಲ್ಲಿ ಅನೇಕರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡು ಅರಿಕೆ ಮಾಡತೊಡಗಿದರು.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.


ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.


ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸಿದನು.


ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.


ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.


ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.


ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.


ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ


ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು.


ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.


ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.


ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು