Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:17 - ಪರಿಶುದ್ದ ಬೈಬಲ್‌

17 ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:17
7 ತಿಳಿವುಗಳ ಹೋಲಿಕೆ  

ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು