ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.
ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ.
ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.
“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.
ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.