ಯಾಜಕಕಾಂಡ 1:10 - ಪರಿಶುದ್ದ ಬೈಬಲ್10 “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.