ಯಾಜಕಕಾಂಡ 1:11 - ಪರಿಶುದ್ದ ಬೈಬಲ್11 ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಉತ್ತರದ ಕಡೆ ವಧಿಸಲಿ. ತರುವಾಯ ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |