Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:16 - ಪರಿಶುದ್ದ ಬೈಬಲ್‌

16 ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದರ ಕರುಳುಗಳನ್ನೂ, ಗರಿಗಳನ್ನೂ ತೆಗೆದುಬಿಟ್ಟು ಬಲಿಪೀಠದ ಪೂರ್ವದಿಕ್ಕಿನಲ್ಲಿರುವ ಬೂದಿಯ ಎಡೆಯಲ್ಲಿ ಬಿಸಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರ ಕರುಳುಗಳನ್ನೂ ಗರಿಗಳನ್ನೂ ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಬೀಸಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:16
8 ತಿಳಿವುಗಳ ಹೋಲಿಕೆ  

ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


“ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.


ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.


ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು