Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:5 - ಪರಿಶುದ್ದ ಬೈಬಲ್‌

5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:5
25 ತಿಳಿವುಗಳ ಹೋಲಿಕೆ  

ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.


ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.


ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.


ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ಯಾಜಕನು ಅದನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.


ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.


ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು.


ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು.


ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.


ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು.


“ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.


ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು