ಯಾಜಕಕಾಂಡ 1:9 - ಪರಿಶುದ್ದ ಬೈಬಲ್9 ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು. ಅಧ್ಯಾಯವನ್ನು ನೋಡಿ |
ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.