Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:1 - ಪರಿಶುದ್ದ ಬೈಬಲ್‌

1 ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:1
38 ತಿಳಿವುಗಳ ಹೋಲಿಕೆ  

ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.


ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.


ಆರೋನನ ಇಬ್ಬರು ಪುತ್ರರು ಯೆಹೋವನಿಗೆ ಆತನು ಆಜ್ಞಾಪಿಸದೇ ಇದ್ದ ಧೂಪವನ್ನು ಅರ್ಪಿಸುತ್ತಿದ್ದಾಗ ಸತ್ತರು. ಅದಾದ ನಂತರ ಯೆಹೋವನು ಮೋಶೆಯೊಡನೆ ಮಾತಾಡಿದನು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:


ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.


ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.


ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.


ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.


ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.”


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು.


“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು