Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:12 - ಪರಿಶುದ್ದ ಬೈಬಲ್‌

12 ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:12
14 ತಿಳಿವುಗಳ ಹೋಲಿಕೆ  

ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.


ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.


ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.


ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.


ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು