ಯಾಜಕಕಾಂಡ 10:13 - ಪರಿಶುದ್ದ ಬೈಬಲ್13 ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದು ಮಹಾಪರಿಶುದ್ಧವಾಗಿರುವದರಿಂದ ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿನಗೂ ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ. ಅಧ್ಯಾಯವನ್ನು ನೋಡಿ |
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.
“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.