ಯಾಜಕಕಾಂಡ 10:19 - ಪರಿಶುದ್ದ ಬೈಬಲ್19 ಆದರೆ ಆರೋನನು ಮೋಶೆಗೆ, “ನೋಡು ಈ ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಆರೋನನು ಮೋಶೆಗೆ - ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನಿಗೆ ಒಳ್ಳೇದಾಗಿ ತೋಚುತ್ತಿತ್ತೋ ಎಂದು ಉತ್ತರಕೊಡಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.