Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:5 - ಪರಿಶುದ್ದ ಬೈಬಲ್‌

5 ಮಿಶಾಯೇಲ ಮತ್ತು ಎಲ್ಸಾಫಾನ ಮೋಶೆಯ ಮಾತಿಗೆ ವಿಧೇಯರಾದರು. ಅವರು ನಾದಾಬ ಮತ್ತು ಅಬೀಹು ಎಂಬವರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋದರು. ನಾದಾಬ ಮತ್ತು ಅಬೀಹು ತೊಟ್ಟುಕೊಂಡಿದ್ದ ವಿಶೇಷವಾದ ಹೆಣೆದ ಅಂಗಿಗಳು ಇನ್ನೂ ಅವರ ಮೃತಶರೀರಗಳ ಮೇಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಬಂದು ಸತ್ತವರ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಹೊರಕ್ಕೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆದು ಬಿಡದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೋಶೆಯು ಹೇಳಿದ ಹಾಗೆಯೇ, ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:5
3 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು.


ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು