Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:6 - ಪರಿಶುದ್ದ ಬೈಬಲ್‌

6 ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:6
23 ತಿಳಿವುಗಳ ಹೋಲಿಕೆ  

ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


“‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.


“ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.


“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.


ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.


“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.


ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


“ಈಗ ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು