Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:2 - ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಇಸ್ರಯೇಲರಿಗೆ ತಿಳಿಸಬೇಕಾದ ವಿಷಯಗಳು ಇವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು- ಭೂವಿುಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:2
22 ತಿಳಿವುಗಳ ಹೋಲಿಕೆ  

ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.


“ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,


ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು.


“ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ,


“ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.


“ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.


ಯೆಹೋವನು ಮೋಶೆ ಆರೋನರಿಗೆ ಹೀಗೆಂದನು:


ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು