Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:20 - ಪರಿಶುದ್ದ ಬೈಬಲ್‌

20 “ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿವಿುಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:20
14 ತಿಳಿವುಗಳ ಹೋಲಿಕೆ  

ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.


ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


“ರೆಕ್ಕೆಯುಳ್ಳ ಹುಳಗಳೆಲ್ಲಾ ಅಶುದ್ಧ. ಆದ್ದರಿಂದ ಅವುಗಳನ್ನು ತಿನ್ನಬೇಡಿ.


“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.


ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.


ಕೊಕ್ಕರೆ, ಸಕಲ ವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.


ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು