Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:25 - ಪರಿಶುದ್ದ ಬೈಬಲ್‌

25 ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:25
34 ತಿಳಿವುಗಳ ಹೋಲಿಕೆ  

ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.


ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.


ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.


ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.


ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.


ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


“ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.


“ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.


ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು