ಯಾಜಕಕಾಂಡ 11:26 - ಪರಿಶುದ್ದ ಬೈಬಲ್26-27 “ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವು ಯಾವುವೆಂದರೆ, ಯಾವ ಪ್ರಾಣಿ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವುವೋ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವು ಯಾವವಂದರೆ, ಯಾವ ಪಶುವು ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವವೋ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |