Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:3 - ಪರಿಶುದ್ದ ಬೈಬಲ್‌

3 ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:3
17 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.


“ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:


“ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.


ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.


“ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು.


ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದ್ದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹೆಣವನ್ನೂ ನೀವು ಮುಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು