Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:34 - ಪರಿಶುದ್ದ ಬೈಬಲ್‌

34 ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವುದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:34
7 ತಿಳಿವುಗಳ ಹೋಲಿಕೆ  

ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.


ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು