Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:35 - ಪರಿಶುದ್ದ ಬೈಬಲ್‌

35 ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆ ಜಂತುಗಳ ಹೆಣ ಯಾವ ವಸ್ತುಗಳ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು. ಅದು ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವದು. ಒಲೆಗಳಲ್ಲಿ ಅದು ಒಂಟೊಲೆಯಾಗಿದ್ದರೂ ಜೋಡೊಲೆಯಾಗಿದ್ದರೂ ಅದು ಅಶುದ್ಧವಾದದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:35
8 ತಿಳಿವುಗಳ ಹೋಲಿಕೆ  

“ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.


ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.


ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.


ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.


“ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.


ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು