ಯಾಜಕಕಾಂಡ 11:4 - ಪರಿಶುದ್ದ ಬೈಬಲ್4-6 “ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ ಒಂಟೆ ಮೆಲುಕುಹಾಕುವಂಥದ್ದಾದರೂ ಅದಕ್ಕೆ ಸೀಳು ಗೊರಸು ಇಲ್ಲ. ಆದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದು ತಿಳಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಿರುವದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸುಸೀಳಿದ್ದರೂ ಮೆಲಕು ಹಾಕುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ದೃಷ್ಟಾಂತ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿ |