Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:40 - ಪರಿಶುದ್ದ ಬೈಬಲ್‌

40 ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:40
25 ತಿಳಿವುಗಳ ಹೋಲಿಕೆ  

ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


“ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.


ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.


“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು