Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:45 - ಪರಿಶುದ್ದ ಬೈಬಲ್‌

45 ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:45
22 ತಿಳಿವುಗಳ ಹೋಲಿಕೆ  

ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.


“ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!


ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.


“ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.


“ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು