Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:8 - ಪರಿಶುದ್ದ ಬೈಬಲ್‌

8 ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:8
22 ತಿಳಿವುಗಳ ಹೋಲಿಕೆ  

ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.


ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


“ಯಾವನಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲಿ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲಿ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.


ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


ಆದ್ದರಿಂದ ನೀವು ಅಂಥ ಜನರೊಂದಿಗೆ ಪಾಲುಗಾರರಾಗಬೇಡಿ.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ.


ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.


ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.


ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.


ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.


ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.


ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.


“ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು