Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:9 - ಪರಿಶುದ್ದ ಬೈಬಲ್‌

9 “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಸಮುದ್ರದಲ್ಲಿಯಾಗಲಿ ನದಿಯಲ್ಲಿಯಾಗಲಿ ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:9
7 ತಿಳಿವುಗಳ ಹೋಲಿಕೆ  

ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!


ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು