Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:5 - ಪರಿಶುದ್ದ ಬೈಬಲ್‌

5 ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೆಣ್ಣುಮಗುವನ್ನು ಹೆತ್ತರೆ, ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಪೂರ್ಣಶುದ್ಧಳಾಗಲು ಅರವತ್ತಾರು ದಿನಗಳು ಕಾದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆಣ್ಣು ಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಶುದ್ಧೀಕರಣಪೂರ್ತಿಗೆ ಅರುವತ್ತಾರು ದಿವಸ ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:5
5 ತಿಳಿವುಗಳ ಹೋಲಿಕೆ  

ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.


“ಇಸ್ರೇಲರಿಗೆ ಹೀಗೆ ಹೇಳು: “ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.


ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು