ಯಾಜಕಕಾಂಡ 12:6 - ಪರಿಶುದ್ದ ಬೈಬಲ್6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿ |
ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.”