Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:7 - ಪರಿಶುದ್ದ ಬೈಬಲ್‌

7-8 ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಪರಿಶುದ್ಧತೆ ನಿವೃತ್ತಿಯಾಗಿ ಶುದ್ಧಳಾಗುವಳು. ಗಂಡುಮಗುವನ್ನಾಗಲಿ ಹೆಣ್ಣುಮಗುವನ್ನಾಗಲಿ ಹೆತ್ತವಳಿಗೆ ಇದೇ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:7
16 ತಿಳಿವುಗಳ ಹೋಲಿಕೆ  

ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.


“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು