Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:21 - ಪರಿಶುದ್ದ ಬೈಬಲ್‌

21 ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ಯಾಜಕನು ಪರೀಕ್ಷಿಸಿ ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಯಾಜಕನು ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯಾಜಕನು ಅದನ್ನು ಪರೀಕ್ಷಿಸಲು, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದಿದ್ದರೆ ಮತ್ತು ಸ್ವಲ್ಪ ಮಬ್ಬಾಗಿದ್ದರೆ, ಆಗ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:21
4 ತಿಳಿವುಗಳ ಹೋಲಿಕೆ  

ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


“ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.


ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.


ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು