Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:24 - ಪರಿಶುದ್ದ ಬೈಬಲ್‌

24-25 “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಒಬ್ಬ ವ್ಯಕ್ತಿಯ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ವಿುಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:24
5 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.


ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಈ ಭಾಗವನ್ನು ಯಾಜಕನಿಗೆ ತೋರಿಸಬೇಕು.


ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.


ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು