ಯಾಜಕಕಾಂಡ 13:26 - ಪರಿಶುದ್ದ ಬೈಬಲ್26 ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಯಾಜಕನು ನೋಡುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು. ಅಧ್ಯಾಯವನ್ನು ನೋಡಿ |