ಯಾಜಕಕಾಂಡ 13:29 - ಪರಿಶುದ್ದ ಬೈಬಲ್29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ, ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
“ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.