ಯಾಜಕಕಾಂಡ 13:3 - ಪರಿಶುದ್ದ ಬೈಬಲ್3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸಬೇಕು. ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಮಚ್ಚೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಮಚ್ಚೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾಜಕನು ಚರ್ಮದ ಮೇಲಿರುವ ವ್ಯಾಧಿಯನ್ನು ಪರೀಕ್ಷಿಸಬೇಕು. ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ, ಆ ವ್ಯಾಧಿಯು ಅವನ ಚರ್ಮಕ್ಕಿಂತಲೂ ಆಳವಾಗಿ ಕಂಡರೆ, ಅದು ಚರ್ಮರೋಗವಾಗಿರುವುದು. ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿ |
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.