Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:30 - ಪರಿಶುದ್ದ ಬೈಬಲ್‌

30 ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿ ಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ದದ್ದು ಆಗಿರುವದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:30
5 ತಿಳಿವುಗಳ ಹೋಲಿಕೆ  

ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯಲಾಗದ ದದ್ದು,


“ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.


ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು