ಯಾಜಕಕಾಂಡ 13:31 - ಪರಿಶುದ್ದ ಬೈಬಲ್31 ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯಾಜಕನು ಆ ಇಸಬನ್ನು ನೋಡುವಾಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕರು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಾಜಕನು ಆ ದದ್ದನ್ನು ನೋಡುವಾಗ ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯಾಜಕನು ಆ ಇಸಬಿನ ವ್ಯಾಧಿಯನ್ನು ನೋಡಿದಾಗ, ಅದು ಉಳಿದ ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪುಕೂದಲು ಇರದಿದ್ದರೆ, ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |