ಯಾಜಕಕಾಂಡ 13:34 - ಪರಿಶುದ್ದ ಬೈಬಲ್34 ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಇಸುಬನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಏಳನೆಯ ದಿನದಲ್ಲಿ ಯಾಜಕನು ತಿರಿಗಿ ಆ ದದ್ದನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿ |