Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:4 - ಪರಿಶುದ್ದ ಬೈಬಲ್‌

4 “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:4
14 ತಿಳಿವುಗಳ ಹೋಲಿಕೆ  

ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳವರೆಗೆ ಪಾಳೆಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ತನಕ ಇಸ್ರೇಲರು ಪ್ರಯಾಣ ಮಾಡಲಿಲ್ಲ.


ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.


ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.


ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.


ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ಯಾಜಕನು ಬೂಷ್ಟನ್ನು ನೋಡಬೇಕು. ಅವನು ಆ ವಸ್ತುವನ್ನು ಏಳು ದಿನಗಳವರೆಗೆ ಪ್ರತ್ಯೇಕವಾದ ಸ್ಥಳದಲ್ಲಿರಿಸಬೇಕು.


ಆಗ ಯಾಜಕನು ಹೊರಗೆ ಹೋಗಿ ಮನೆಗೆ ಏಳು ದಿನಗಳವರೆಗೆ ಬೀಗ ಹಾಕಿಸಬೇಕು.


ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು