Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:40 - ಪರಿಶುದ್ದ ಬೈಬಲ್‌

40 “ಒಬ್ಬ ಮನುಷ್ಯನ ತಲೆಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳುತಲೆಯವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯಾವನಾದರೂ ತಲೆಯ ಕೂದಲು ಉದುರಿಹೋದದರಿಂದ ಬೋಳತಲೆಯವನಾದರೂ ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:40
10 ತಿಳಿವುಗಳ ಹೋಲಿಕೆ  

ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.


ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.


ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.


ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.


ಒಬ್ಬನ ತಲೆಯ ಪಾರ್ಶ್ವಗಳಿಂದ ಕೂದಲು ಉದುರಿಹೋಗುತ್ತಿದ್ದರೆ, ಅದು ಇನ್ನೊಂದು ರೀತಿಯ ಬೋಳುತಲೆಯಷ್ಟೆ.


ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು