Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:45 - ಪರಿಶುದ್ದ ಬೈಬಲ್‌

45 “ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:45
24 ತಿಳಿವುಗಳ ಹೋಲಿಕೆ  

ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.”


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.


ನಾನು ನನ್ನ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನ್ನು ತೋರಿಸಲು ನೀವು ನಿಮ್ಮ ಮೀಸೆಯನ್ನು ಮುಚ್ಚಿಕೊಳ್ಳುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನ್ನುವ ಆಹಾರವನ್ನು ನೀವು ತಿನ್ನುವುದಿಲ್ಲ.


“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಆಗ ಆ ವ್ಯಕ್ತಿಯ ತಲೆಯಲ್ಲಿ ಕುಷ್ಠರೋಗವಿದೆ. ಅವನು ಅಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು.


ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು