ಯಾಜಕಕಾಂಡ 13:59 - ಪರಿಶುದ್ದ ಬೈಬಲ್59 ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ. ಅಧ್ಯಾಯವನ್ನು ನೋಡಿ |