Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:8 - ಪರಿಶುದ್ದ ಬೈಬಲ್‌

8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:8
9 ತಿಳಿವುಗಳ ಹೋಲಿಕೆ  

ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.


ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ.


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.


“ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


“ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.


“ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು