Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:10 - ಪರಿಶುದ್ದ ಬೈಬಲ್‌

10 “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:10
26 ತಿಳಿವುಗಳ ಹೋಲಿಕೆ  

“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.


ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


“ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,


ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು.


ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ತಂದುಕೊಡಬೇಕು; ಹೇಗೆಂದರೆ, ಒಂದು ಹೋರಿಗೆ ಒಂಭತ್ತು ಸೇರು ಗೋಧಿಹಿಟ್ಟು, ಒಂದು ಟಗರಿಗೆ ಆರು ಸೇರು ಗೋಧಿಹಿಟ್ಟು,


ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು.


“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.


ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”


“ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.


ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು